ಬೆಂಗಳೂರು, ನ 28 (DaijiworldNews/MS): ವೋಟರ್ ಐಡಿ ಅಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ಪಾಲು ಹೊಂದಿದ್ದಾರೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಕಾಂಗ್ರೆಸ್, " ಚಿಲುಮೆ ಸಂಸ್ಥೆಯಲ್ಲಿ ಲೆಟರ್ ಹೆಡ್, ಚೆಕ್ ದೊರಕಿದ ವಿಚಾರವಾಗಿ ಸಚಿವ ಡಾ. ಅಶ್ವಥ್ ನಾರಾಯಣ ಅವರ ವಿಚಾರಣೆ ಮಾಡುವ ದಮ್ಮು, ತಾಕತ್ತು ಇಲ್ಲವೇ ಮುಖ್ಯಮಂತ್ರಿ ಬಿಎ ಸ್ ಬೊಮ್ಮಾಯಿ ಅವರೇ
ಸಚಿವರಿಗೂ ಚಿಲುಮೆಗೂ ಏನು ಸಂಬಂಧ?ಬೇರೆಲ್ಲವನ್ನೂ ಪುಂಖಾನುಪುಂಖವಾಗಿ ಮಾತಾಡುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯದಿರುವುದೇಕೆ? ಸಿಎಂ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ " ಎಂದು ಪ್ರಶ್ನಿಸಿದೆ.
"ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ಹೇಳಿದ್ದಾರೆ.ಒತ್ತಡ ಹಾಕಿದ ರಾಜಕೀಯದವರು ಯಾರು? ಅವರ ಹಿತಾಸಕ್ತಿ ಏನಿತ್ತು? ಚಿಲುಮೆ ಸಂಸ್ಥೆಯ ಹಣದ ಮೂಲ ಯಾವುದು? ಚೆಕ್, ಲೆಟರ್ ಹೆಡ್ ಸಿಕ್ಕಿರುವ ಸಂಗತಿಯನ್ನು ಬಚ್ಚಿಡುತ್ತಿರುವುದೇಕೆ? ಅಕ್ರಮಗಳ ಮಹಾಪೋಷಕ ಸಿಎಂ ಬೊಮ್ಮಾಯಿ ಅವರು ಜನತೆಗೆ ಉತ್ತರಿಸಬೇಕು" ಎಂದು ಒತ್ತಾಯಿಸಿದೆ.