ಬೆಂಗಳೂರು, ನ 28 (DaijiworldNews/HR): ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನವನ್ನು ತಿರುಚಿದ ಅಪಕೀರ್ತಿ ಕಾಂಗ್ರೆಸ್ ಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನವನ್ನು ತಿರುಚಿದ ಅಪಕೀರ್ತಿ ಕಾಂಗ್ರೆಸ್ ಗೆ ಸಲ್ಲುತ್ತದೆ. ಹೀಗಾಗಿ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇನ್ನು ಸಂವಿಧಾನದ ಬಗ್ಗೆ ಕಾಂಗ್ರೆಸ್ ಪಕ್ಷದಿಂದಾಗಲಿ ಅಥವಾ ಸಿದ್ದರಾಮಯ್ಯ ಅವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ಸಂವಿಧಾನ ತಿರುಚಿದ್ದು ಯಾವ ಪಕ್ಷ ಎಂದು ಪ್ರಶ್ನಿಸಿದ್ದಾರೆ.