ಬೆಂಗಳೂರು, ನ 28 (DaijiworldNews/MS): ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, "ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ? ಎಂದು ಪ್ರಶ್ನಿಸಿದೆ.
ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು ಅದು ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಕೈ ಸರ್ಕಾರದ ವಿರುದ್ದ ಕೇಳಿದೆ.