ಕೊಡಗು, ನ 29 (DaijiworldNews/MS): ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸುಂಟಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ನಡೆದಿದೆ.
ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತ ಕಾಮಿ ಆರೋಪಿಯನ್ನು ಅಬೂಬ್ಬಕ್ಕರ್ ಸಿದ್ಧಿಕ್ ಎಂದು ಗುರುತಿಸಲಾಗಿದೆ
ಸ್ಥಳೀಯ ನಿವಾಸಿ ಸಿ.ಎ.ದೇವಯ್ಯ ಹಸು ಮೇಯಲು ಬಿಟ್ಟು ಸುಂಟಿಕೊಪ್ಪ ಸಂತೆಗೆ ಹೋಗಿದ್ದರು. ಆದರೆ ವಾಪಸ್ ಬರುವ ಸಂದರ್ಭ ತಮ್ಮ ಗದ್ದೆಯ ದಾರಿಯಲ್ಲಿ ಮೋಟಾರ್ ಬೈಕ್ ನಿಂತಿದ್ದನ್ನು ಗಮನಿಸಿದ್ದಾರೆ. ಮನೆ ಹೋಗಿ ಮೇಯಲು ಬಿಟ್ಟಿದ್ದ ಹಸುವನ್ನು ವಾಪಸ್ ಕೊಟ್ಟಿಗೆಗೆ ತರಲು ಹೋದ ಸಂದರ್ಭದಲ್ಲಿ ಆರೋಪಿ ಹಸುವಿನ ಮೇಲೆ ದೌರ್ಜನ್ಯ ಎಸಗುತ್ತಿದ್ದುದು ಕಂಡಿದೆ. ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಆರೋಪಿಯನ್ನು ಹಿಡಿದಿದ್ದಾರೆ.
ಸಿದ್ಧಿಕ್ನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 377 ಪ್ರಕಾರ ಮೊಕದ್ದಮೆ ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಈ ಸಂದರ್ಭ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.