ಬೆಂಗಳೂರು, ನ 29 (DaijiworldNews/MS): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇರಳ ಮೂಲದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು ಬೆಳಕಿಗೆ ಬಂದಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಿಟಿಎಂ ಲೇಔಟ್ ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಕೆಲಸ ಮುಗಿದ ಬಳಿಕ ಗುರುವಾರ ರಾತ್ರಿ ಬಿಟಿಎಂ ಲೇಔಟ್ನಿಂದ ನೀಲಾದ್ರಿ ನಗರಕ್ಕೆ ರ್ಯಾಪಿಡೋ ಬೈಕ್ ಬುಕ್ಕಿಂಗ್ ಮಾಡಿದ್ದಳು.
ಮದ್ಯಪಾನ ಮಾಡಿದ್ದ ಆಕೆಯನ್ನು ಪಿಕ್ ಮಾಡಿದ್ದ ರ್ಯಾಪಿಡೋ ಬೈಕ್ ಯುವಕ ಡ್ರಾಪ್ ಪಾಯಿಂಟ್ನಲ್ಲಿ ಬಿಡದೆ ತನ್ನ ಸ್ನೇಹಿತನ ನೆರವಿನಿಂದ ನೀಲಾದ್ರಿ ನಗರದ ತನ್ನ ರೂಮ್ಗೆ ಕರೆದೊಯ್ದಿದ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಪ್ರಜ್ಞೆ ಬಂದ ಬಳಿಕ ಬೆದರಿಕೆ ಹಾಕಿ ಕಳುಹಿಸಿದ್ದರು.
ಘಟನೆ ಬಗ್ಗೆ ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ರ್ಯಾಪಿಡೋ ಬೈಕ್ ಸವಾರ ಶಹಾಬುದ್ದೀನ್ ಮತ್ತು ಆತನ ಸ್ನೇಹಿತ ಅಖ್ತರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.