ಹೈದರಾಬಾದ್, ನ 29 (DaijiworldNews/MS): 10ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಆಕೆಯ ಐವರು ಸಹಪಾಠಿಗಳು ಸಾಮೂಹಿಕ ಅತ್ಯಾಚಾರವೆಸಗಿ , ದೌರ್ಜನ್ಯದ ವಿಡಿಯೋ ರೆಕಾರ್ಡಿಂಗ್ ಮೂಲಕ ಬ್ಲ್ಯಾಕ್ಮೇಲ್ ಮಾಡಿರುವ ಘಟನೆ ಹೈದರಾಬಾದ್ನ ಹೊರವಲಯದಲ್ಲಿರುವ ಹಯತ್ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಗಸ್ಟ್ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದ್ದರೂ, ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡುವುದರೊಂದಿಗೆ ಇದೀಗ ಘಟನೆ ಬೆಳಕಿಗೆ ಬಂದಿದೆ.
ಆರೋಪಿಗಳು ತಮ್ಮ ಮೊಬೈಲ್ನಲ್ಲಿ ಕೃತ್ಯವನ್ನು ರೆಕಾರ್ಡ್ ಮಾಡಿದ್ದು ಯಾರಿಗಾದರೂ ತಿಳಿಸಿದರೆ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಹತ್ತು ದಿನಗಳ ನಂತರ ಮತ್ತೆ ಬಾಲಕಿಯ ಮೇಲೆ ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಆರೋಪಿಗಳು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಪೋಷಕರಿಗೆ ವಿಷಯ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪೊಲೀಸರು ಐವರು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ, ಎಲ್ಲಾ ಅಪ್ರಾಪ್ತ ವಯಸ್ಕರಾಗಿದ್ದು. ಅವರನ್ನು ರಿಮಾಂಡ್ ಹೋಂಗೆ ಕಳುಹಿಸಲಾಗಿದೆ.