ಬೆಂಗಳೂರು, ನ 29 (DaijiworldNews/MS): ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಅಪರಾಧಗಳು ಜಾಸ್ತಿಯಾಗುತ್ತವೆ ಎಂಬ ಮಾಜಿ ಸಚಿವ ಸಿ.ಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ" ಸಿ.ಟಿ.ರವಿ ಒಬ್ಬ ಕಮ್ಯುನಲ್ ಫೆಲೊ " ಎಂದು ಕಿಡಿಕಾರಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, " ಸಿ.ಟಿ ರವಿ ಇದ್ದಾನಲ್ಲಾ ಅವನು ಕೋಮುವಾದಿ. ಅವನಿಗೆಲ್ಲಾ ನಾನು ಉತ್ತರ ಕೊಡಲ್ಲ. ಹಿ ಇಸ್ ಏ ಮೋಸ್ಟ್ ಕಮ್ಯುನಲ್ ಫೆಲ್ಲೋ. ಅವರಿಗೆ ಜಾತ್ಯಾತೀತ ತತ್ವ ಅರ್ಥವಾಗಲ್ಲ. ಸಂವಿಧಾನ ಅವರಿಗೆ ಅರ್ಥವಾಗಲ್ಲ. ಅವನಿಗೆ ನಾನು ಉತ್ತರ ಕೊಡುತ್ತಾ ಕೂರಲ್ಲ” ಎಂದಿದ್ದಾರೆ.
ಚುನಾವಣೆ ಸ್ಫರ್ಧೆಗೆ ಬೇರೆ ಕ್ಷೇತ್ರಗಳಿಂದ ಆಹ್ವಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, "ಕರೆಯುತ್ತಿದ್ದಾರೆ. ನಾನೂ ಅರ್ಜಿ ಹಾಕಿದ್ದೇನೆ. ಹೈಕಮಾಂಡ್ ಗೆ ಬಿಟ್ಟಿದ್ದೇನೆ. ಅವರೇ ಹೇಳಿದ ಜಾಗದಲ್ಲಿ ಸ್ಪರ್ಧೆ ಮಾಡುತ್ತೇನೆ. ಒಂದೇ ಕ್ಷೇತ್ರಕ್ಕೆ ಹಲವು ಜನರಿಂದ ಅರ್ಜಿ ವಿಚಾರವಾಗಿ ಸಾಮಾಜಿಕ ನ್ಯಾಯದ ಜೊತೆಗೆ ಗೆಲುವುನ್ನು ಪರಿಗಣನೆ ಮಾಡಬೇಕಾಗುತ್ತದೆ. ಕೋಮುವಾದಿ ಪಕ್ಷ, ಮನುವಾದಿ ಪಕ್ಷವನ್ನು ಕಿತ್ತು ಹಾಕಬೇಕು. ಇವರಿಂದ ದೇಶ ಮತ್ತು ರಾಜ್ಯ ಉಳಿಯುವುದಿಲ್ಲ. ಇದು ನಮ್ಮ ಕಾರ್ಯಕರ್ತರ ಅಭಿಪ್ರಾಯವಾಗಿದೆ" ಎಂದು ಹೇಳಿದ್ದಾರೆ.