ನವದೆಹಲಿ, ನ 29 (daijiworldews/HR): ದೆಹಲಿಯ ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣದ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ದೆಹಲಿ ಪೊಲೀಸರಿಗೆ ನ್ಯಾಯಾಲಯ ಅನುಮತಿ ನೀಡಿದೆ ಎಂದು ಪೂನಾವಾಲಾ ಪರ ವಕೀಲ ಅಭಿನಾಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 1 ಮತ್ತು 5ರಂದು ಮಂಪರು ಪರೀಕ್ಷೆಗಾಗಿ ಪೂನಾವಾಲಾನನ್ನು ರೋಹಿಣಿಯಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕೊಂಡೊಯ್ಯಲು ಅನುಮತಿ ಕೋರಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ಕೋರ್ಟ್ ಒಪ್ಪಿಗೆ ನೀಡಿದೆ.
ಇನ್ನು ವಿಧಿವಿಜ್ಞಾನ ತಜ್ಞರು ಪೂನಾವಾಲಾನನ್ನು ರೋಹಿಣಿಯಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಮಂಪರು ಪರೀಕ್ಷೆಗೆ ಒಳಪಡಿಸುವರು ಎಂದು ಪೊಲೀಸರು ಈ ಹಿಂದೆ ಹೇಳಿದ್ದರು.