ಬೆಮೆತಾರಾ, ನ 29 (DaijiworldNews/SM): 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ೧೭ರ ಬಾಲಕ ಬಳಿಕ ಆಕೆಯನ್ನು ಕೊಂದು ಹಾಕಿರುವ ಘಟನೆ ನಡೆದಿದೆ.
ಛತ್ತೀಸ್ಗಢದ ಬೆಮೆತಾರಾ ಜಿಲ್ಲೆಯಲ್ಲಿ ಘಟನೆ ವರದಿಯಾಗಿದೆ. ಬಾಲಕನ ಮನೆ ಸಮೀಪದಲ್ಲೇ ನೆಲೆಸಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಟಿ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಸೋಮವಾರ 17 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಂತ್ರಸ್ತ ಬಾಲಕಿ ಶನಿವಾರ ನಿಗೂಢವಾಗಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಲಾಗಿದೆ ಎಂದು ಕೊತ್ವಾಲಿ ಸ್ಟೇಷನ್ ಹೌಸ್ ಆಫೀಸರ್ ಅಂಬರ್ ಸಿಂಗ್ ಭಾರದ್ವಾಜ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.
ಸ್ಥಳೀಯರನ್ನು ವಿಚಾರಣೆ ನಡೆಸಿದ ನಂತರ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.