ನವದೆಹಲಿ, ನ 30 (DaijiworldNews/MS): ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.