ಬೆಂಗಳೂರು, ನ. 30 (DaijiworldNews/SM): ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.
ಕೇಂದ್ರ ಸರ್ಕಾರದ ನಿಷೇಧ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ನಿವಾಸಿ ಹಾಗೂ ನಿಷೇಧಿತ ಸಂಘಟನೆಯ ರಾಜ್ಯಾಧ್ಯಕ್ಷ ನಾಸಿರ್ ಅಲಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ. ಈ ಮೂಲಕ ಹೈಕೋರ್ಟ್ ಕೇಂದ್ರ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.