ಬೆಂಗಳೂರು, ಡಿ 01 (DaijiworldNews/MS): ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಕುರಿತು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯಲ್ಲಿದ್ದು ರಾಜ್ಯದ ಪರವಾಗಿ ಸಮರ್ಥ ವಾದ ಮಂಡಿಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ನಡುವೆ "ನಮ್ಮ ನಿಲುವು ಸಾಂವಿಧಾನಿಕ ಹಾಗೂ ಕಾನೂನು ಬದ್ಧವಾಗಿದೆ" ಎಂದು ಸಿಎಂ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.
ಗಡಿ ವಿವಾದ ಸಂಬಂಧ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಕರ್ನಾಟಕ ನಿಲುವು ತುಂಬಾ ಸ್ಪಷ್ಟವಾಗಿದೆ. ಮಹಾರಾಷ್ಟ್ರದ ಅರ್ಜಿಯನ್ನು ಕೋರ್ಟ್ ಪರಿಗಣಿಸುವುದಿಲ್ಲ. ಯಾಕೆಂದರೆ ನಮ್ಮ ನಿಲುವು ಸಾಂವಿಧಾನಿಕ ಮತ್ತು ಕಾನೂನು ಬದ್ಧವಾಗಿದೆ ಎಂದು ಹೇಳಿದ್ದಾರೆ
ಕರ್ನಾಟಕ-ಮಹಾರಾಷ್ಟ್ರ ನಡುವೆ ಹಲವು ದಶಕಗಳಿಂದ ಸಂಘರ್ಷಕ್ಕೆ ಕಾರಣವಾಗಿರುವ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಸರ್ಕಾರವು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತ ಅರ್ಜಿಯ ವಿಚಾರಣೆ ನಡೆಯಬೇಕಿದೆ. ಗಡಿ ವಿವಾದವನ್ನು ಬಗೆಹರಿಸುವುದು ನ್ಯಾಯಲಯದ ವ್ಯಾಪ್ತಿಗೆ ಬರುತ್ತದೆಯೋ, ಇಲ್ಲವೋ ಎಂಬುದುರ ಕುರಿತು ಅಂತಿಮ ತೀರ್ಪು ಇನ್ನಷ್ಟೇ ಹೊರಬೀಳಬೇಕಿದೆ