ಬೆಂಗಳೂರು, ಡಿ 01 (DaijiworldNews/MS): ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ನ ಟೂಲ್ಕಿಟ್ ಸುದ್ದಿಗಳು ಆರಂಭವಾಗಿವೆ. ಅದರಲ್ಲಿ ಒಂದು ‘ಪ್ರತ್ಯೇಕ ಮುಸ್ಲಿಂ ಕಾಲೇಜು’ ಸುದ್ದಿ ಎಂದು ಬಿಜೆಪಿ ಆರೋಪಿಸಿದೆ.
ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಸರ್ಕಾರದಿಂದ ಈ ಬಗ್ಗೆ ಯಾವುದೇ ಪ್ರಸ್ತಾಪವೂ ಇಲ್ಲ, ಕಾಂಗ್ರೆಸ್ಗೆ ಕೆಲಸವೂ ಇಲ್ಲ’ ಎಂದು ಕಿಡಿಕಾರಿದೆ.
ಇದೇ ವಿಚಾರವಾಗಿ ಈ ಹಿಂದೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಹಾಗೂ ಖುದ್ದು ಮುಖ್ಯಮಂತ್ರಿ ಬೊಮ್ಮಾಯಿ "ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ಅಥವಾ ಕಡತ ಸರಕಾರದ ಮುಂದೆ ಇಲ್ಲ ಈಗಾಗಲೇ ಸರಕಾರ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಿದೆ ಎನ್ನುವ ಸುದ್ದಿ ಸತ್ಯಕ್ಕೆ ದೂರವಾಗಿದೆ" ಎಂಬ ಹೇಳಿಕೆ ನೀಡಿದ್ದರು.