ನವದೆಹಲಿ, ಡಿ 02 (daijiworldNews/HR): ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ಕ್ಯಾಂಪಸ್ನಲ್ಲಿರುವ ಕಟ್ಟಡದ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಬರಹಗಳನ್ನು ಬರೆಯಲಾಗಿದ್ದು, ಅದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕಟ್ಟಡದ ಗೋಡೆಗಳ ಮೇಲೆ ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಈ ಪ್ರಚೋದನಕಾರಿ ಬರಹಗಳನ್ನು ಬರೆಯಲಾಗಿದೆ.
ಇನ್ನು ಬ್ರಾಹ್ಮಣರೇ ಕ್ಯಾಂಪಸ್ ಬಿಟ್ಟು ಹೊರಡಿ, ಭಾರತವನ್ನೂ ಬಿಟ್ಟು ಹೋಗಿ. ನಾವು ನಿಮಗಾಗಿ ಬರುತ್ತಿದ್ದೇವೆ! ನಾವು ಸೇಡು ತೀರಿಸಿಕೊಳ್ಳುತ್ತೇವೆ ಎಂದು ಗೋಡೆಯ ಮೇಲೆ ಘೋಷಣೆಗಳನ್ನು ಬರೆಯಲಾಗಿದೆ.