ನವದೆಹಲಿ, ಡಿ 02 (daijiworldNews/HR): ಪಂಜಾಬ್ ಗಾಯಕ, ರಾಜಕಾರಣಿ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ನನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಭಾರತದ ಗುಪ್ತಚರ ಸಂಸ್ಥೆಗಳು ಅಂತಾರಾಷ್ಟ್ರೀಯ ಮೂಲಗಳಿಂದ ಪ್ರಮುಖ ಮಾಹಿತಿ ಪಡೆದಿವೆ. ಆದರೆ ಇದುವರೆಗೆ ಈ ವಿಷಯದಲ್ಲಿ ಕ್ಯಾಲಿಫೋರ್ನಿಯಾ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ ಎಂದು ವರದಿಯಾಗಿದೆ.
ಇನ್ನು ಗುಪ್ತಚರ ಇಲಾಖೆಗಳಾದ ರಾ, ಇಂಟಲಿಜೆನ್ಸ್ ಬ್ಯೂರೋ, ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಮತ್ತು ಪಂಜಾಬ್ ಗುಪ್ತಚರ ತಂಡ ಈ ಬಗ್ಗೆ ಮಾಹಿತಿ ಪಡೆದಿದೆ ಎಂದು ವರದಿ ತಿಳಿಸಿದೆ.