ನವದೆಹಲಿ, ಡಿ 02 (daijiworldNews/HR): ಸುಕೇಶ್ ಚಂದ್ರಶೇಖರ್ ಮತ್ತು ಸಹಚರರ ವಿರುದ್ಧ ನಡೆಯುತ್ತಿರುವ 200 ಕೋಟಿ ಹಣ ಅಕ್ರಮ ವರ್ಗಾವಣೆ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಹೇಳಿಕೆ ದಾಖಲಿಸಿಕೊಳ್ಳಲು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಶುಕ್ರವಾರ ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನೋರಾ ಫತೇಹಿ ಈ ಹಿಂದೆಯೂ ವಿಚಾರಣೆಗೆ ಹಾಜರಾಗಿದ್ದು, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ನೋರಾ ಫತೇಹಿ ಹೇಳಿಕೆಯನ್ನು ದಾಖಲಿಸಲಾಗಿದೆ.
ಇನ್ನು ಈಗಾಗಲೇ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಜಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ.