ನವದೆಹಲಿ, ಡಿ 08 (DaijiworldNews/DB): ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಜನರಿಗೆ ತುಂಬಾ ನಂಬಿಕೆಯಿದೆ. ಗುಜರಾತ್ನಲ್ಲಿ ಬಿಜೆಪಿ ಪರ ಅಲೆ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿರುವ ನಡುವೆಯೇ ಸುದ್ದಿಸಂಸ್ಥೆಯೊಂದರ ಜೊತೆ ಗುರುವಾರ ಮಾತನಾಡಿದ ಅವರು, ಗುಜರಾತ್ನಲ್ಲಿ ಹೊಸ ದಾಖಲೆ ಸೃಷ್ಟಿಸಲು ನಾವು ಸಿದ್ದರಾಗಿದ್ದೇವೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಜನರಿಗೆ ತುಂಬಾ ನಂಬಿಕೆ ಇದೆ. ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಿಯಾಗಿ ಅವರು ಮಾಡಿದ ಅಭಿವೃದ್ದಿ ಕೆಲಸಗಳೇ ಅವರ ಮೇಲೆ ನಂಬಿಕೆ ಮೂಡಲು ಶ್ರೀರಕ್ಷೆಯಾಗಿದೆ ಎಂದವರು ಹೇಳಿದರು.
ಗುಜರಾತ್ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, 100ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದರೊಂದಿಗೆ ಬಿಜೆಪಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ.