ನವದೆಹಲಿ, ಡಿ 08( DaijiworldNews/MS): ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೂತನ ಸರ್ಕಾರ ರಚಿಸಲಿದೆ ಎಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ ಗುರುವಾರ ಹೇಳಿದ್ದಾರೆ.
ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿನ ಅಂಕಿಅಂಶಗಳ ಪ್ರಕಾರ, ಮತ ಎಣಿಕೆ ಪ್ರಗತಿಯಲ್ಲಿದ್ದು, ಗುಡ್ಡಗಾಡು ರಾಜ್ಯದಲ್ಲಿ ಕಾಂಗ್ರೆಸ್ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಗೆಲುವಿನತ್ತ ದಾಪುಗಾಲಿಡುತ್ತಿದೆ.
ಈಗಿರುವ ಟ್ರೆಂಡ್ಗಳ ಪ್ರಕಾರ, ನಾವು ಹಿಮಾಚಲ ಪ್ರದೇಶದಲ್ಲಿ ನಮ್ಮ ಸರ್ಕಾರವನ್ನು ರಚಿಸಲಿದ್ದೇವೆ. ಸರ್ಕಾರ ರಚನೆಯ ಕಾರ್ಯವನ್ನು ಕಾಂಗ್ರೆಸ್ ಈಗಾಗಲೇ ಆರಂಭಿಸಿದೆ. ಛತ್ತೀಸಗಢ ಮುಖ್ಯಮುಂತ್ರಿ ಭೂಪೇಶ್ ಬಘೇಲ್ ಮತ್ತು ಹಿಮಾಚಲ ಪ್ರದೇಶದ ಎಐಸಿಸಿ ಉಸ್ತುವಾರಿ ರಾಜೀವ್ ಶುಕ್ಲಾ ಅವರೊಂದಿಗೆ ಶೀಘ್ರದಲ್ಲೇ ಶಿಮ್ಲಾಗೆ ತೆರಳುತ್ತೇ ನೆಎಂದು ಭೂಪಿಂದರ್ ಹೂಡಾ ತಿಳಿಸಿದ್ದಾರೆ.
ಹಿಮಾಚಲ ಪ್ರದೇಶವು ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ - ಬಿಜೆಪಿ ಹೀಗೆ ಪರ್ಯಾಯ ಸರ್ಕಾರಗಳ ಸಂಪ್ರದಾಯವನ್ನು ಅನುಸರಿಸುತ್ತಿದೆ.