ಚೆನ್ನೈ, ಡಿ 9 (DaijiworldNews/HR): ಮಂಡೂಸ್ ಚಂಡಮಾರುತ ಇಂದು ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ತಮಿಳುನಾಡಿನ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ, ಚೆಂಗಲ್ಪಟ್ಟು, ವಿಲ್ಲುಪುರಂ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ಇನ್ನು ಮಂಡೌಸ್ ಚಂಡಮಾರುತ ಇಂದು ತೀವ್ರ ಚಂಡಮಾರುತದ ತೀವ್ರತೆಯನ್ನು ಕಾಯ್ದುಕೊಳ್ಳುವ ಸಾಧ್ಯತೆಯಿದ್ದು, ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತದೆ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರವನ್ನು ದಾಟುತ್ತದೆ ಎನ್ನಲಾಗಿದೆ.
ಇಂದು ಮಧ್ಯರಾತ್ರಿ ಮತ್ತು ನಾಳೆ ಮುಂಜಾನೆ 65-75 ಕಿಮೀ ವೇಗದಲ್ಲಿ ಗಂಟೆಗೆ 85 ಕಿಮೀ ವೇಗದಲ್ಲಿ ಗಾಳಿ ಬೀಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.