ಜೈಪುರ, ಡಿ 09 ( DaijiworldNews/MS): ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ರಾಜಕೀಯ ಎದುರಾಳಿ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ಮೋದಿ, ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
"ಸೋನಿಯಾ ಗಾಂಧಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಭಗವಂತ ದೀರ್ಘಾಯುಷ್ಯ ಮತ್ತು ಆರೋಗ್ಯ ಕರುಣಿಸಲಿ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಭಾರತ್ ಜೋಡೋ ಯಾತ್ರೆ ರಾಜಸ್ಥಾನದ ಮೂಲಕ ಹಾದು ಹೋಗುತ್ತಿರುವ ಕಾರಣ ,ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎರಡು ದಿನಗಳ ರಾಜಸ್ಥಾನ ಪ್ರವಾಸದಲ್ಲಿದ್ದಾರೆ. ರಣ್ಥಾಂಬೋರ್ನ ಶೇರ್ ಭಾಗ್ ಹೋಟೆಲ್ನಲ್ಲಿ ಸೋನಿಯಾ ತಂಗಿದ್ದು, ಅಲ್ಲಿಯೇ 76 ನೇ ವರ್ಷದ ಹುಟ್ಟು ಹಬ್ಬದ ಆಚರಣೆ ನಡೆಯಲಿದೆ. ಸ್ಥಳೀಯ ಆಡಳಿತ ಹಾಗೂ ಪಕ್ಷದ ಮುಖಂಡರು ಸಂಭ್ರಮಕ್ಕೆ ಅಗತ್ಯ ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್ನ ಹಿರಿಯ ಮುಖಂಡರು ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ.