ಬೆಂಗಳೂರು,ಮಾ.04(AZM) : ಇಂದು ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಅತ್ಯತ್ತುಮ ರೀತಿಯಲ್ಲಿ ಮಾತುಕತೆ ನಡೆದಿದ್ದು, ಒಮ್ಮತದ ಬಗ್ಗೆ ಚರ್ಚೆಯಾಗಿದೆ. ಈ ಹಿನ್ನಲೆ ಹೈಕಮಾಂಡ್ ಮಟ್ಟದಲ್ಲಿ ಸೀಟು ಹಂಚಿಕೆ ಅಂತಿಮವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಫಲಪ್ರದ ಮಾತುಕತೆ ನಡೆಸಿದ್ದೇವೆ. ಹಾಗೂ ಸ್ಥಾನ ಹಂಚಿಕೆ ಸಂಬಂಧ ಈ ಹಿಂದೆ ಹಾಗೂ ಇಂದು ಸುಧೀರ್ಘ ಚರ್ಚೆಯಾಗಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಡುವೆ ಅಂತಿಮ ಹಂತದ ಮಾತುಕತೆ ನಡೆಯಲಿದೆ. ಅದಾದ ಬಳಿಕ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎಂದರು.