ಬೆಂಗಳೂರು,ಮಾ.04(AZM): ರಾಜ್ಯದ ವಿವಿಧ ರಾಜಕೀಯ ನಾಯಕರು ಪಕ್ಷಬೇಧ ಮರೆತು ಕೇಂದ್ರದ ಮಾಜಿ ಸಚಿವ ವಿ.ಧನಂಜಯ ಕುಮಾರ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಧನಂಜಯ್ ಅವರ ಅಗಲಿಕೆಗೆ ತೀವ್ರ ಸಂತಾಪ ಸೂಚಿಸಿದ್ದು, ವಾಜಪೇಯಿ ಸರ್ಕಾರದಲ್ಲಿ ಎರಡು ಅವಧಿಯಲ್ಲಿ ವಿವಿಧ ಖಾತೆಗಳನ್ನು ನಿಭಾಯಿಸಿದ ಅನುಭವ ಅವರದಾಗಿತ್ತು ಎಂದು ಸ್ಮರಿಸಿದ್ದಾರೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಒಬ್ಬ ಉತ್ತಮ ಗೆಳೆಯನ ಅಗಲಿಕೆಯು ತುಂಬಾ ನೋವು ಕಾಡುತ್ತಿದೆ ಎಂದು ತಮ್ಮ ನೋವನ್ನು ಟ್ವೀಟ್ ಮಾಡಿದ್ದಾರೆ.
ಮಾಜೀ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೇಂದ್ರ ಸಚಿವ ಸದಾನಂದ ಗೌಡ, ಮಾಜಿ ಪ್ರಧಾನಿ ದೇವೇ ಗೌಡ ಸೇರಿದಂತೆ ರಾಜಕೀಯದ ಪ್ರಮುಖರು ಕೇಂದ್ರದ ಮಾಜಿ ಸಚಿವ ವಿ.ಧನಂಜಯ ಕುಮಾರ್ ಅಗಲಿಕೆಗೆ ಸಂತಾಪ ಸೂಚಿಸಿದರು.