ಬೆಂಗಳೂರು, ಡಿ12 ( DaijiworldNews/MS): ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗುತ್ತಿದ್ದು, ಒಂದೆರಡು ದಿನದೊಳಗೆ ಅಂತಿಮ ತೀರ್ಮಾನವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಅಲ್ಲಿ ಕೇಂದ್ರದ ನಾಯಕರನ್ನು ಭೇಟಿಯಾಗುತ್ತಾರೆ. ಆ ಬಳಿಕ ಡಿ.14ರಂದು ದಿಲ್ಲಿಯಲ್ಲಿ ಅಮಿತ್ ಶಾ ಭೇಟಿ ಬಳಿಕ ಜೆಪಿ ನಡ್ಡಾ ಸೇರಿ ಹೈಕಮಾಂಡ್ನಿಂದ ಸಂಪುಟ ವಿಸ್ತರಣೆಗೆ ಗ್ರೀನ್ಸಿಗ್ನಲ್ ಪಡೆಯಲಿದ್ದಾರೆ.
ರಮೇಶ್ ಜಾರಕಿಹೊಳಿ, ಈಶ್ವರಪ್ಪ ಸೇರಿದಂತೆ ಐವರು ಸಚಿವ ಸಂಪುಟ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.