ಪಾಕಿಸ್ತಾನ,ಮಾ.05(AZM): ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿ 44 ಉಗ್ರರನ್ನು ಬಂಧಿಸಲಾಗಿದೆ ಎಂದು ಪಾಕಿಸ್ತಾನದ ಗೃಹ ಸಚಿವ ಶಹರ್ಯಾರ್ ಅಫ್ರಿದಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೈಶೆ ಮುಹಮ್ಮದ್ ಉಗ್ರ ಸಂಘಟನೆಯ ಸ್ಥಾಪಕ ಮಸೂದ್ ಅಝರ್ ಸಹೋದರ ಅಬ್ದುಲ್ ರವೂಫ್ ಅಸ್ವರ್ ಹಾಗೂ ಇತರ 43 ಮಂದಿಯನ್ನು ಪಾಕಿಸ್ತಾನ ಸರಕಾರ ಬಂಧಿಸಿದೆ.ಬಂಧನ ಕಾರ್ಯಾಚರಣೆಯನ್ನು ಮಾರ್ಚ್ 4ರಂದು ಘೋಷಿಸಲಾಗಿದ್ದು, ಎರಡು ವಾರಗಳ ಕಾಲ ಮುಂದುವರಿಯಲಿದೆ ಎಂದು ಅವರು ಹೇಳಿದರು.
ಪಾಕಿಸ್ತಾನದ ಬಾಲಕೋಟ್ನಲ್ಲಿರುವ ಜೈಶೆ ಮುಹಮ್ಮದ್ ಭಯೋತ್ಪಾದಕ ಸಂಘಟನೆಯ ತರಬೇತಿ ಶಿಬಿರದ ಮೇಲೆ ಭಾರತೀಯ ವಾಯುಪಡೆ ವಿಮಾನಗಳು ದಾಳಿ ನಡೆಸಿದ ಕೆಲವೇ ದಿನಗಳಲ್ಲಿ ಪಾಕಿಸ್ತಾನ ಈ ಕ್ರಮಕ್ಕೆ ಮುಂದಾಗಿದೆ ಎಂದರು.
ಇನ್ನು ಇದೇ ವೇಳೆ ಅವರು ಬಂಧಿತ ಆರೋಪಿಗಳ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ಬಂಧಿತರನ್ನು ತನಿಖೆಗೊಳಪಡಿಸಲಾಗುವುದು ಹಾಗೂ ಅವರು ಯಾವುದೇ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅವರನ್ನು ಬಂಧಿಸಿ ಮೊಕದ್ದಮೆ ಹೂಡಲಾಗುವುದು ಎಂದು ತಿಳಿಸಿದರು.