ಬೆಂಗಳೂರು,ಡಿ 18( DaijiworldNews/MS): ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ದ್ವಿಗುಣ ಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ವರೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ 3 ಸಾವಿರ ರೂ., ಉಪಾಧ್ಯಕ್ಷರು 2 ಸಾವಿರ ರೂ ಹಾಗೂ ಸದಸ್ಯರಿಗೆ 1 ಸಾವಿರ ರೂ. ಮಾಸಿಕ ಗೌರವ ಧನ ನೀಡಲಾಗುತ್ತಿತ್ತು. ಇದೀಗ ಅಧ್ಯಕ್ಷರಿಗೆ 6 ಸಾವಿರ ರೂ. , ಉಪಾಧ್ಯಕ್ಷ ರಿಗೆ 4 ಸಾವಿರ ರೂ. ಹಾಗೂ ಸದಸ್ಯರಿಗೆ 2 ಸಾವಿರ ರೂ. ಗೌರವ ಧನ ನಿಗದಿ ಪಡಿಸಿ ಸರ್ಕಾರಿ ಆದೇಶ ಹೊರಡಿಸಲಾಗಿದೆ.
ಹಲವು ವರ್ಷಗಳಿಂದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಗೌರವಧನ ಹೆಚ್ಚಳ ಮಾಡುವ ಬೇಡಿಕೆ ಇದೀಗ ಕೈಗೂಡಿದೆ.