ಬೆಳಗಾವಿ, ಡಿ 21 ( DaijiworldNews/MS): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಮಧ್ಯಾಹ್ನ 1 ಗಂಟೆಗೆ ಮಹತ್ವದ ಘೋಷಣೆ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಮೀಸಲು ಕುರಿತು ಸರ್ಕಾರ ಈಗಾಗಲೇ ಸಭೆ ನಡೆಸಿದ್ದು, ಸರಿಯಾಗಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ನಡುವೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆಯವರು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದಾರೆ. ಪಂಚಮಸಾಲಿ ಮೀಸಲು ಹೋರಾಟ ತಾರಕಕ್ಕೆ ಏರಿರುವ ಹಿನ್ನೆಲೆಯಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಹೀಗಾಗಿ ತರಾತುರಿಯಲ್ಲಿ ಮಧ್ಯಂತರ ವರದಿ ತರಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಪಂಚಮಸಾಲಿ ಮೀಸಲಿಗೆ ಆಗ್ರಹಿಸಿ ಸಮುದಾಯದ ಮುಖಂಡರು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು , ನಾಯಕರಿಗೆ ಸ್ವಲ್ಪ ತಾಳ್ಮೆಯಿಂದ ಇರುವಂತೆ ಮನವಿ ಮಾಡಿದ್ದಾರೆ