ಭೋಜ್ಪುರ, ಡಿ 24 (DaijiworldNews/DB): ಪಾಕ್ ಪರ ಘೋಷಣೆ ಕೂಗಿದ ಆರೋಪದಲ್ಲಿ ಬಿಹಾರದಲ್ಲಿ ಐವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಭೋಜ್ಪುರದ ಚಾಂಡಿ ಗ್ರಾಮದಲ್ಲಿ ಆಯೋಜಿಸಿದ್ದ ಬ್ಯಾಡ್ಮಿಂಟನ್ ಆಟದಲ್ಲಿ ಜಯಗಳಿಸಿದ ಗುಂಪೊಂದು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದೆ. ಈ ವೀಡಿಯೋ ವೈರಲ್ ಆಗಿದ್ದು, ಟ್ರೋಫಿಯನ್ನು ಇಬ್ಬರು ಹಿಡಿದುಕೊಂಡಿದ್ದು, ಕೆಲವು ಯುವಕರು ಪಾಕ್ ಪರ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದ್ದಾರೆ. ವೀಡಿಯೋವನ್ನು ಸಾಕ್ಷ್ಯವಾಗಿಟ್ಟುಕೊಂಡು ಐವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ಘೋಷಣೆ ಕೂಗಿದ ಇತರರ ಬಗ್ಗೆಯೂ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಐವರನ್ನು ಈಗಾಗಲೇ ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಆರೋಪಿಗಳ ವಿರುದ್ದ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಎಚ್ಒ ಚಾಂಡಿ ಅವರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.