ಪಟ್ನಾ, ಡಿ 24 (DaijiworldNews/HR): ಬಿಹಾರದಲ್ಲಿ ಇಟ್ಟಿಗೆ ಗೂಡಿನ ಚಿಮಣಿ ಸ್ಫೋಟಗೊಂಡ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರ ಸಂಬಂಧಿಕರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಮೋತಿಹಾರಿ ಪೊಲೀಸರು, 'ರಾಮಘರ್ವಾ ಪಿಎಸ್ನ ನಾರೀಗಿರ್ನಲ್ಲಿ ಇಟ್ಟಿಗೆ ಗೂಡಿನ ಚಿಮಣಿ ಸ್ಫೋಟದಿಂದ ಒಂಬತ್ತು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಘಟನೆಯಲ್ಲಿ ಮೃತಪಟ್ಟವರಲ್ಲಿ ಇಟ್ಟಿಗೆ ಗೂಡು ಮಾಲೀಕ ಮೊಹಮ್ಮದ್ ಇಶ್ರಾರ್ ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.