ಜೈಪುರ, ಜ 01 (DaijiworldNews/DB): ಟ್ರಕ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಐವರು ಮೃತಪಟ್ಟು, ಓರ್ವ ಗಾಯಗೊಂಡ ಘಟನೆ ರಾಜಸ್ಥಾನದ ಹನುಮಾನ್ಗಢ್ ಜಿಲ್ಲೆಯ ಬಿಸ್ರಾಸರ್ ಗ್ರಾಮದ ಬಳಿ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಟ್ರಕ್ ಮತ್ತು ಕಾರು ನಡುವೆ ಢಿಕ್ಕಿಯಾಗಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸ್ಥಳಕ್ಕಾಗಮಿಸಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಲ್ಲದೆ ಕಾರಿನಲ್ಲಿದ್ದವರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ ಆ ವೇಳೆಗಾಗಲೇ ಐವರು ಮೃತಪಟ್ಟಿದ್ದರು. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಅಪಘಾತ ನಡೆದ ಕೂಡಲೇ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.