ರಾಜಸ್ಥಾನ,ಮಾ 08 (MSP):ಭಾರತೀಯ ವಾಯುಪಡೆಯ ಸೇರಿದ ‘ಮಿಗ್–21’ ಯುದ್ಧ ವಿಮಾನ ರಾಜಸ್ಥಾನದ ಬಿಕಾನೇರ್ ಬಳಿ ಶುಕ್ರವಾರ ಪತನವಾಗಿದ್ದು, ಪೈಲೆಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಾಂತ್ರಿಕ ದೋಷದಿಂದ ವಿಮಾನ ಪತನವಾಗಿದ್ದು, ಪ್ಯಾರಾಚ್ಯೂಟ್ ಮೂಲಕ ಪೈಲೆಟ್ ಸುರಕ್ಷಿತವಾಗಿ ಇಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ನ್ಯಾಯಾಲಯ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ
ಫೆಬ್ರುವರಿ 27ರಂದು ಜಮ್ಮು ಮತ್ತು ಕಾಶ್ಮೀರದ ಬಡಗಾಂ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ಮಿಗ್-21 ವಿಮಾನ ಪತನಗೊಂಡು ಇಬ್ಬರು ಪೈಲಟ್ಗಳು ಮೃತಪಟ್ಟಿದ್ದ ಬೆನ್ನಲ್ಲೇ ಇದೀಗ ಮತ್ತೊಂದು ಮಿಗ್-21 ವಿಮಾನ ಪತನವಾಗಿದೆ.