ಬೆಂಗಳೂರು, ಜ 04 ( DaijiworldNews/MS): ಭಾರತ್ ಜೊಡೋ ಯಾತ್ರೆಯಲ್ಲಿ ಭಾಗವಹಿಸಬೇಕಾಗಿದ್ದ ಪ್ರಿಯಾಂಕಾ ಗಾಂಧಿ ಅವರು, 'ನಾ ನಾಯಕಿ' ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಮಹಿಳಾ ಕಾಂಗ್ರೆಸ್ ರಾಜ್ಯಾದ್ಯಂತ ಆಯೋಜಿಸಿದ್ದ 'ನಾ ನಾಯಕಿ' ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಹಾಗೂ ನಗರದ ಕ್ವೀನ್ಸ್ ರಸ್ತೆಯಲ್ಲಿ ಸುಮಾರು 20 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಗ್ರೆಸ್ನ ನೂತನ ಕಚೇರಿ ‘ಭಾರತ್ ಜೋಡೋ ಭವನ’ ಉದ್ಘಾಟನೆಗಾಗಿ ಕಾಂಗ್ರೆಸ್ ವರಿಷ್ಠೆ ಪ್ರಿಯಾಂಕಾ ಗಾಂಧಿ ಜ.6ರಂದು ನಗರಕ್ಕೆ ಆಗಮಿಸಲಿದ್ದಾರೆ.
ಜ.9ರಂದು ಬೆಳಗ್ಗೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಸುಮಾರು ಆರು ವರ್ಷಗಳ ದೀರ್ಘ ಅವಧಿಯಲ್ಲಿ 20 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಭಾರತ ಜೋಡೋ ಭವನವನ್ನು ಉದ್ಘಾಟಿಸಲಿದ್ದಾರೆ. ಈ ಬೃಹತ್ ಕಟ್ಟಡವು ಮೂರು ಅಂತಸ್ತುಗಳನ್ನು ಹೊಂದಿದ್ದು, ನೆಲ ಹಾಗೂ ಮೊದಲ ಮಹಡಿ ಒಗ್ಗೂಡಿ ಬೃಹತ್ ಆಡಿಟೋರಿಯಂ ಹೊಂದಿದೆ. ಎರಡನೇ ಮಹಡಿಯಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಕಚೇರಿಗಳು ಇರಲಿವೆ. ಇದಲ್ಲದೆ, ಎರಡು ತಳ ಮಹಡಿಗಳನ್ನು ವಾಹನ ನಿಲುಗಡೆಗಾಗಿ ನಿರ್ಮಿಸಲಾಗಿದೆ.