ನವದೆಹಲಿ, ಜ 06 ( DaijiworldNews/MS): ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚೇತರಿಸಿಕೊಳ್ಳುತ್ತಿದ್ದಾರೆಂದು ದೆಹಲಿಯ ಗಂಗಾರಾಮ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಸುದ್ದಿಗೋಷ್ಠಿ ಕರೆದು ಮಾತನಾಡಿದ ಆಸ್ಪತ್ರೆಯ ಮುಖ್ಯಸ್ಥ ಅಜಯ್ ಸ್ವರೂಪ್, ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಸೋನಿಯಾ ಅವರು ಕಳೆದ ಬುಧವಾರದಂದು ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ.
ವೈದ್ಯ ಅನುರೂಪ್ ಬಸು ನೇತೃತ್ವದ ವೈದ್ಯರ ತಂಡ ನಿಗಾ ವಹಿಸಿದೆ ಎಂದು ಮಾಹಿತಿ ನೀಡಿದ್ದಾರೆ.