ಬೆಂಗಳೂರು, ಜ 08 ( DaijiworldNews/MS): ಮೋದಿ ಸರ್ಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಟ್ಯಾಬ್ಲೋ ಕೈ ಬಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು ಕರ್ನಾಟಕ ರಾಜ್ಯವೆಂದರೆ ಮೋದಿಗೆ ಒಂಥರ ಅಸಡ್ಡೆ. ರಾಜ್ಯದ ಸಮಸ್ಯೆ ಬಗ್ಗೆ ಬಿಜೆಪಿಯವರಿಗೆ ಮಾತನಾಡುವ ಶಕ್ತಿಯೂ ಇಲ್ಲ, ಧೈರ್ಯವಿಲ್ಲ
ರಾಜ್ಯದಲ್ಲಿ 25 ಸಂಸದರಿದ್ದಾರೆ. ಅವರನ್ನು ಕರೆದು ಒಂದು ದಿನ ಕೂಡ ಚರ್ಚೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ರಾಜ್ಯದ ಸಮಸ್ಯೆ ಬಗ್ಗೆ ನಿಯೋಗ ಕರೆದೊಯ್ಯುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಬೇಕಾಗಿತ್ತು. ಅದೂ ಕೂಡಾ ಮಾಡಿಲ್ಲ ಎಂದು ಹೇಳಿದ್ದಾರೆ
ಮೀಸಲಾತಿ ಹೆಚ್ಚಳದ ಬಗ್ಗೆ ಸರಿಯಾದ ಮಾಹಿತಿಯನ್ನು ಈ ಸರ್ಕಾರ ನೀಡಿಲ್ಲ. ದಲಿತರಿಗೆ ಯಾವ ರೀತಿ ಮೋಸ ಮಾಡುತ್ತಿದ್ದಾರೆ ಎಂಬುದು ಅದರಿಂದ ಗೊತ್ತಾಗುತ್ತಿದೆ. ಈ ಡಬಲ್ ಇಂಜಿನ್ ಸರ್ಕಾರ ಕಿತ್ತೊಗೆಯಬೇಕು ಎಂಬುದಾಗಿ ಕರೆ ನೀಡಿದರು.