ಬೆಂಗಳೂರು, ಜ 10 ( DaijiworldNews/MS): ಕಿಚ್ಚ ಸುದೀಪ್ ರಾಜಕೀಯ ಅಖಾಡಕ್ಕೆ ಇಳಿಯುವ ಕುರಿತು ಭಾರೀ ವದಂತಿ ಕೇಳಿಬರುತ್ತಿದೆ. ಮೇಲ್ನೋಟಕ್ಕೆ ಸುದೀಪ್ ಎಲ್ಲಾ ಪಕ್ಷದ ಮುಖಂಡರೊಂದಿಗೆ ಆತ್ಮೀಯ ಸಂಬಂಧವನ್ನು ಬೆಳೆಸಿಕೊಂಡಿದ್ದಾರೆ. ಹೀಗಾಗಿ ಯಾವ ಪಕ್ಷ ಸೇರುತ್ತಾರೆ ಎಂಬುವುದೇ ಕುತೂಹಲ ಮೂಡಿಸಿದೆ.
ನಟಿ ರಮ್ಯಾ ಮೂಲಕ ರಾಹುಲ್ ಗಾಂಧಿ ಜೊತೆ ಉತ್ತಮ ಸಂಬಂಧ ಹೊಂದಿರುವ ಕಿಚ್ಚ ಸುದೀಪ್ ಕಾಂಗ್ರೆಸ್ ಸೇರುತ್ತಾರಾ ಎಂಬ ಪ್ರಶ್ನೆ ಹುಟ್ಟುಹಾಕಿದೆ.
ಈಗಾಗಲೇ ಸುದೀಪ್ ಅವರನ್ನು ಭೇಟಿ ಮಾಡಿರುವ ರಮ್ಯಾ ಕಾಂಗ್ರೆಸ್ ಪಕ್ಷದ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ವಾಲ್ಮೀಕಿ ಸಮುದಾಯ ಸೆಳೆಯಲು ಚಿತ್ರದುರ್ಗ ಅಥವಾ ತವರು ಜಿಲ್ಲೆ ಶಿವಮೊಗ್ಗದಿಂದ ಕಣಕ್ಕಿಳಿಸಲು ಕೈ ಪಕ್ಷ ಯತ್ನಿಸುತ್ತಿರುವುದಾಗಿ ಹೇಳಲಾಗಿದೆ. ಆದರೆ ಈ ಬಗ್ಗೆ ಸುದೀಪ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.