ಬೆಂಗಳೂರು, ಜ 13 ( DaijiworldNews/MS): ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರು ಪ್ರಸಾದ್ ಅವರನ್ನು ಬೆಂಗಳೂರಿನ ಗಿರಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚೆಕ್ ಬೌನ್ಸ್ ಪ್ರಕರಣ ಸಂಬಂಧ ನಿರ್ದೇಶಕರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಕುರಿತ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಗುರು ಪ್ರಸಾದ್ ಅವರನ್ನು ಪೊಲೀಸರು ಕೋರ್ಟ್ ಮುಂದೆ ಹಾಜರು ಪಡಿಸಲಿದ್ದಾರೆ. ಶ್ರೀನಿವಾಸ್ ಹೆಸರಿನ ವ್ಯಕ್ತಿಗೆ ಹಣ ಕೊಡುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು ಗುರು ಪ್ರಸಾದ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು
ಇವರು ಮಠ ಮತ್ತು ಎದ್ದೇಳು ಮಂಜುನಾಥ ಖ್ಯಾತಿಯ ಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದರು.