ಬೆಂಗಳೂರು, ಜ 14 ( DaijiworldNews/MS): ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆಯಲ್ಲಿರುವ, ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಜನವರಿ 17 ರ ಬಳಿಕ ವಿಸ್ತರಣೆ ಆಗುವ ನಿರೀಕ್ಷೆ ಇದೆ.
ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, ಕೇಂದ್ರದ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಿದ್ದು, ಮೂರು ಪ್ರತ್ಯೇಕ ಪಟ್ಟಿಯನ್ನ ಸಿದ್ಧಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಜ,೧೭ಮತ್ತು ೧೮ ರಂದು ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ಆ ಸಭೆಯ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ. ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ , ರಮೇಶ್ ಜಾರಕಿಹೊಳಿ ಸೇರಿ ಸದ್ಯ ಖಾಲಿಯಿರುವ ಐದು ಸಚಿವ ಸ್ಥಾನಗಳ ಭರ್ತಿ ಮಾಡಲು ಸಿಎಂ ಬೊಮ್ಮಾಯಿ ಲೆಕ್ಕಚಾರ ಹಾಕಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಹೊಸಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರ ಸಿಎಂ ಸಿದ್ದಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.