ನಾಗ್ಪುರ, ಜ 14 (DaijiworldNews/DB): ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಇಂದು ಬೆಳಗ್ಗೆ 11:30ಕ್ಕೆ ನಾಗ್ಪುರದ ಖಮ್ಲಾ ಪ್ರದೇಶದಲ್ಲಿರುವ ಗಡ್ಕರಿ ಕಚೇರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಸಚಿವರಿಗೆ ಜೀವ ಬೆದರಿಕೆ ಒಡ್ಡಿದ್ದಾನೆ. ಎರಡು ಬಾರಿ ಕಚೇರಿ ಫೋನ್ಗೆ ಕರೆ ಬಂದಿದೆ.
ಜೀವ ಬೆದರಿಕೆ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ದ ನಾಗ್ಪುರ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದಾರೆ. ಅಲ್ಲದೆ ನಿತಿನ್ ಗಡ್ಕರಿ ಕಚೇರಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.