ಬೆಂಗಳೂರು, ಮಾ 16 (MSP): ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾ.16ರ ಶುಕ್ರವಾರ ಅವರು ಹೈದ್ರಾಬಾದ್ ನಲ್ಲಿ ಆಯೋಜಿಸಲಾದ ಕುರುಬ ಸಮಾವೇಶ ಪಾಲ್ಗೊಳ್ಳಲು ತೆರಳಿದ್ದಾಗ ವಿಶ್ವನಾಥ್ ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರು ಹೈದ್ರಾಬಾದ್ ನ ಓಜೋನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡುಬಂದಿದೆ.
ಅವರ ಪರಿಸ್ಥಿತಿಯನ್ನು ಗಮನಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ , ಬೆಂಗಳೂರಿಗೆ ಏರ್ ಆ್ಯಂಬುಲೆನ್ಸ್ ಮೂಲಕ ಕರೆ ತರಲು ಸಿದ್ದತೆ ನಡೆಸಲಾಗಿದೆ. ಆ ಬಳಿಕ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ವಿಶ್ವನಾಥ್ ಗೆ ಅವರನ್ನು ದಾಖಲು ಮಾಡಲಾಗುವುದು ಎಂದು ತಿಳಿದುಬಂದಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅವರು ಓಜೋನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.