ಹಾಪುರ್ (ಉತ್ತರ ಪ್ರದೇಶ), ಮಾ 12 (DaijiworldNews/DB): ಪೊಲೀಸ್ ಪೇದೆಯೊಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಕಾನ್ಸ್ಟೇಬಲ್ ಅಂಕಿತ್ ಕುಮಾರ್(25) ಆತ್ಮಹತ್ಯೆಗೆ ಶರಣಾದವರು. ಕಳೆದ ರಾತ್ರಿ ಅವರು ಸೇವಾ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಹಾಪುರ್ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ವರ್ಮಾ ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬಿಜ್ನೋರ್ ಮೂಲದವರಾದ ಅಂಕಿತ್ ಕುಮಾರ್ ಅವರನ್ನು ಮೊರಾದಾಬಾದ್ನಿಂದ ಹಾಪುರ್ ಪೊಲೀಸ್ ಲೈನ್ಗೆ ಕಳೆದ ಫೆಬ್ರವರಿ ತಿಂಗಳಲ್ಲಿ ವರ್ಗಾಯಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821