ಥಾಣೆ, ಮಾ 16(DaijiworldNews/MS): 2024 ರ ಜನವರಿ ಮೂರನೇ ವಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ದೇವಾಲಯದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹವನ್ನು ಅದರ ಮೂಲ ಸ್ಥಳದಲ್ಲಿ ಸ್ಥಾಪಿಸಲಿದ್ದಾರೆ ಎಂದು ರಾಮಮಂದಿರದ ನಿರ್ಮಾಣ ಮತ್ತು ನಿರ್ವಹಣೆಗಾಗಿ ಸ್ಥಾಪಿಸಲಾದ ಟ್ರಸ್ಟ್ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಲಿಯಲ್ಲಿ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ'ದ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ , "ಜನವರಿ 2024 ರ ಮೂರನೇ ವಾರದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ಕೈಯಯಿಂದ ರಾಮ ಲಲ್ಲಾ (ಶಿಶು ಭಗವಾನ್ ರಾಮ) ವಿಗ್ರಹವನ್ನು ಅದರ ಮೂಲ ಸ್ಥಳದಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ
ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಮಾಹಿತಿ ನೀಡಿದ ಅವರು, ಮಂದಿರ ನಿರ್ಮಾಣಕ್ಕೂ 2024ರ ಸಾರ್ವತ್ರಿಕ ಚುನಾವಣೆಗೂ ಸಂಬಂಧವಿಲ್ಲ "ನಾವು ನಮ್ಮ ಕೆಲಸವನ್ನು ಮಾಡುತ್ತಿದ್ದೇವೆ" ಸ್ಪಷ್ಟಪಡಿಸಿದ್ದಾರೆ.