ನವದೆಹಲಿ, ಮಾ 16 (DaijiworldNews/HR): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಲಂಡನ್ ಸೆಮಿನಾರ್ನಲ್ಲಿ ಭಾರತದ ವಿರುದ್ದ ಮಾತನಾಡಿದಕ್ಕಾಗಿ ಕ್ಷಮೆಯಾಚಿಸಬೇಕು. ನಮ್ಮ ಪ್ರಜಾಪ್ರಭುತ್ವ, ನ್ಯಾಯಾಂಗ ಮತ್ತು ರಾಷ್ಟ್ರವನ್ನು ಅವಮಾನಿಸಿದ್ದಾರೆ. ನಮ್ಮ ರಾಷ್ಟ್ರದ ವಿರುದ್ಧ ಮಾತನಾಡುವವರ ವಿರುದ್ಧ ನಾವು ಧ್ವನಿ ಎತ್ತಬೇಕು ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ರಾಹುಲ್ ಗಾಂಧಿ ಏನಾದರೂ ಹೇಳಿದರೆ, ಅದರಿಂದ ಕಾಂಗ್ರೆಸ್ ಸಮಸ್ಯೆಗೆ ಸಿಲುಕಿದರೆ ಅದಕ್ಕೂ ನಮಗೂ ಸಂಬಂಧವಿಲ್ಲ. ಆದರೆ ಅವರು ನಮ್ಮ ದೇಶವನ್ನು ದೂಷಿಸಿದರೆ ಈ ದೇಶದ ಪ್ರಜೆಗಳಾದ ನಾವು ಸುಮ್ಮನಿರಲು ಸಾಧ್ಯವಿಲ್ಲ ಎಂದಿದ್ದಾರೆ.
ಇತ್ತೀಚೆಗೆ ಲಂಡನ್ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸ ನೀಡಿದ್ದ ರಾಹುಲ್ ಗಾಂಧಿ ಭಾರತೀಯ ಪ್ರಜಾಪ್ರಭುತ್ವವು ಒತ್ತಡದಲ್ಲಿದೆ ಮತ್ತು ದಾಳಿಗೆ ಒಳಗಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಮತ್ತು ಸುದ್ದಿಯಾಗಿದೆ. ನಾನು ಭಾರತದಲ್ಲಿ ವಿರೋಧ ಪಕ್ಷದ ನಾಯಕ, ನಾವು ಆ ಜಾಗವನ್ನು ನ್ಯಾವಿಗೇಟ್ ಮಾಡುತ್ತಿದ್ದೇವೆ. ಭಾರತೀಯ ಪ್ರಜಾಪ್ರಭುತ್ವದ ರಚನೆಗಳು ಕ್ರೂರ ದಾಳಿಗೆ ಒಳಗಾಗಿವೆ ಎಂದಿದ್ದರು.