ದಾವಣಗೆರೆ, ಮಾ 16(DaijiworldNews/MS): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾರತಿಯ ಜನತಾ ಪಕ್ಷದ ಸರ್ವೋಚ್ಛ ನಾಯಕರು, ಅವರ ಮಾರ್ಗದರ್ಶನದಲ್ಲಿಯೇ ನಮ್ಮ ಪಕ್ಷದ ಕೆಲಸ-ಕಾರ್ಯಗಳು, ಕಾರ್ಯಕ್ರಮಗಳು ನಡೆಯುತ್ತವೆ. ಅವರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರು ಪಕ್ಷದ ಮಾರ್ಗದರ್ಶಕರು..ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ಮಹಾಸಂಗಮ ಸಮಾವೇಶ ಮಾರ್ಚ್ 25ಕ್ಕೆ ನಡೆಯಲಿದ್ದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಭರದಿಂದ ತಯಾರಿ ಸಾಗಿದೆ. ಪ್ರಧಾನಿಗಳ ಕಾರ್ಯಕ್ರಮಕ್ಕೆ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದೆ ಎಂದು ಅವರು ಸಿದ್ದರಾಮೋತ್ಸವಕ್ಕೆ ಟಕ್ಕರ್ ಕೊಡಲು ಮಹಾಸಂಗಮ ಸಮಾವೇಶ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.