ನವದೆಹಲಿ, ಮಾ 16 (DaijiworldNews/HR): ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹಾಗೂ ಇತರ ಐವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಉದ್ದೇಶದಿಂದ ದೆಹಲಿ ಸರ್ಕಾರ ಸ್ಥಾಪಿಸಿರುವ 'ಫೀಡ್ಬ್ಯಾಕ್ ಯುನಿಟ್' ಅನ್ನು ದುರುಪಯೋಗಪಡಿಸಿಕೊಂಡಿರುವ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿದೆ .
ಈಗಾಗಲೇ ಮನೀಷ್ ಸಿಸೋಡಿಯಾ ಅವರು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.
ಸಿಸೋಡಿಯಾ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ತಮ್ಮ ಅಧಿಕಾರ ಹಾಗೂ ರಾಜಕೀಯ ಉದ್ದೇಶದಿಂದ ಬೇಹುಗಾರಿಕೆ ನಡೆಸುವ ಸಲುವಾಗಿ ಫೀಡ್ಬ್ಯಾಕ್ ಯುನಿಟ್ ಅನ್ನು ದುರುಪಯೋಗಪಡಿಸಿಕೊಂಡ ಆರೋಪ ಇದೆ.