ನವದೆಹಲಿ, ಮಾ 17 (DaijiworldNews/DB): ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬುದಾಗಿ ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ರಾಹುಲ್ ಹೇಳಿಕೆ ವಿಚಾರವಾಗಿ ಸಂತ್ರಸ್ತರ ವಿವರ ನೀಡಬೇಕು. ಇದು ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲು ಸುಲಭವಾಗುತ್ತದೆ. ಅಲ್ಲದೆ ಸಂತ್ರಸ್ತರಿಗೆ ಭದ್ರತೆ ಒದಗಿಸಲಾಗುವುದು ಎಂದು ಪೊಲೀಸರು ನೋಟಿಸ್ನಲ್ಲಿ ಹೇಳಿದ್ದು, ಇದಕ್ಕಾಗಿ ರಾಹುಲ್ಗೆ ಪ್ರಶ್ನಾವಳಿಗಳನ್ನು ಕಳುಹಿಸಿದ್ದಾರೆ.
ಇನ್ನು ಪೊಲೀಸರ ನೋಟಿಸ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ನೋಟಿಸ್ಗೆ ಕಾನೂನು ಪ್ರಕಾರವೇ ಸೂಕ್ತ ಸಮಯದಲ್ಲಿ ಪ್ರತಿಕ್ರಿಯಿಸುತ್ತೇವೆ. ಆದರೆ ರಾಹುಲ್ ಗಾಂಧಿಯವರು ಮೋದಿ ಮತ್ತು ಅದಾನಿ ಸಂಬಂಧದ ಬಗ್ಗೆ ಪ್ರಶ್ನಿಸಿರುವುದಕ್ಕೆ ತತ್ತರಿಸಿ ಹೋಗಿದೆ. ಕೇಂದ್ರ ಬಿಜೆಪಿ ಸರ್ಕಾರ ತನ್ನ ಪೊಲೀಸರ ಹಿಂದೆ ಅಡಗಿಕೊಂಡಿದೆ ಎಂದು ಟೀಕಿಸಿದೆ.