ನವದೆಹಲಿ, ಮಾ (DaijiworldNews/HR): ನನ್ನ ಪತಿ ಯಾವ ತಪ್ಪನ್ನು ಮಾಡಿಲ್ಲ. ಅವರು ತಪ್ಪು ಮಾಡಲು ಸಾಧ್ಯವೇ ಇಲ್ಲ ಎಂದು ಪ್ರಧಾನ ಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿ ಎಂದು ಸುಳ್ಳು ಹೇಳಿ ಜಮ್ಮು-ಕಾಶ್ಮೀರದ ಆಡಳಿತಾಧಿಕಾರಿಗಳನ್ನೇ ವಂಚಿಸಿ ಬಂಧನಕ್ಕೆ ಒಳಗಾಗಿರುವ ಗುಜರಾತ್ ನ ಕಿರಣ್ ಪಟೇಲ್ ಅವರ ಪತ್ನಿ ಪ್ರತಿಕ್ರಿಯಿಸಿದ್ದಾರೆ.
ಗುಜರಾತ್ ನ ಕಿರಣ್ ಪಟೇಲ್ ಎಂಬಾತ ತಾನು ಪ್ರಧಾನ ಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿ ಎಂದು ಕಾಶ್ಮೀರದ ಆಡಳಿತಾಧಿಕಾರಿಗಳನ್ನು ವಂಚಿಸಿ ಹೈಫೈ ಲೈಫ್ ನಡೆಸುತ್ತಿದ್ದು, ಈತನನ್ನು ಮಾ. 3 ರಂದು ಪೊಲೀಸರು ಬಂಧಿಸಿದ್ದಾರೆ.
ಇನ್ನು ಈತನ ಬಂಧನದ ವಿಷಯವನ್ನು ಪೊಲೀಸರು ರಹಸ್ಯವಾಗಿಟ್ಟಿದ್ದು, ಕೋರ್ಟ್ ಗೆ ಹಾಜರುಪಡಿಸಿದ ವೇಳೆ ನ್ಯಾಯಾಧೀಶರು ಪಟೇಲ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ ಬಳಿಕವಷ್ಟೇ ಪ್ರಕರಣ ಬಹಿರಂಗವಾಗಿರುವುದಾಗಿ ವರದಿ ವಿವರಿಸಿದೆ.
ಈ ಪ್ರಕರಣದ ಬಗ್ಗೆ ಕಿರಣ್ ಪಟೇಲ್ ಪತ್ನಿ ಪ್ರತಿಕ್ರಿಯಿಸಿದ್ದು, ನನ್ನ ಪತಿ ಎಂಜಿನಿಯರ್ ಮತ್ತು ನಾನು ವೈದ್ಯೆ ನನ್ನ ಪತಿ ಇಂಜಿನಿಯರ್ ಆಗಿರುವ ಕಾರಣಕ್ಕೆ ಅಭಿವೃದ್ಧಿ ಕಾರ್ಯದ ಹಿನ್ನೆಲೆಯಲ್ಲಿ ಹೋಗಿದ್ದರು ವಿನಃ ಬೇರೇನೂ ಕಾರಣದಿಂದಲ್ಲ. ನನ್ನ ಪತಿ ಯಾವ ತಪ್ಪನ್ನು ಮಾಡಿಲ್ಲ. ಅವರು ತಪ್ಪು ಮಾಡಲು ಸಾಧ್ಯವೇ ಇಲ್ಲ. ಈ ವಿಷಯವನ್ನು ನಮ್ಮ ವಕೀಲರು ನೋಡಿಕೊಳ್ಳುತ್ತಾರೆ. ಇದಕ್ಕಿಂತ ಹೆಚ್ಚು ಬೇರೇನನ್ನು ನಾನು ಹೇಳುವುದಿಲ್ಲ ಎಂದು ಹೇಳಿದ್ದಾರೆ.