ನವದೆಹಲಿ, ಮಾ (DaijiworldNews/HR): ಅದಾನಿ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಸಮಿತಿಯನ್ನು ರಚಿಸಿದ್ದು, ಜನರು ನ್ಯಾಯಾಂಗ ಪ್ರಕ್ರಿಯೆಯನ್ನು ನಂಬಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಹಿಂಡೆನ್ಬರ್ಗ್ ವರದಿಯಲ್ಲಿ ಮಾಡಲಾದ ಅದಾನಿ ಉದ್ಯಮದ ವಿರುದ್ಧದ ಆರೋಪಗಳ ಮೇಲೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಾ, ನಮ್ಮ ಸರ್ಕಾರವು ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ. ಸುಪ್ರೀಂ ಕೋರ್ಟ್ ಅದರ ತನಿಖೆಗಾಗಿ ಸಮಿತಿಯನ್ನು ರಚಿಸಿದೆ ಮತ್ತು ಜನರು ನ್ಯಾಯಾಂಗ ಪ್ರಕ್ರಿಯೆಯನ್ನು ನಂಬಬೇಕು ಎಂದರು.