ನವದೆಹಲಿ, ಮಾ 19 (DaijiworldNews/DB): ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬುದಾಗಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರ ಪ್ರತಿಕ್ರಿಯೆ ಪಡೆಯಲು ದೆಹಲಿ ಉನ್ನತ ಪೊಲೀಸ್ ಅಧಿಕಾರಿಗಳು ಇಂದು ಅವರ ನಿವಾಸಕ್ಕೆ ತೆರಳಿದ್ದಾರೆ.
ಲೈಂಗಿಕ ಕಿರುಕುಳ ಸಮಸ್ಯೆ ಹೇಳಿಕೊಳ್ಳಲು ತಮ್ಮನ್ನು ಸಂಪರ್ಕಿಸಿದ ಸಂತ್ರಸ್ತ ಮಹಿಳೆಯರ ವಿವರ ನೀಡುವಂತೆ ದೆಹಲಿ ಪೊಲೀಸರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಾರ್ಚ್ 16ರಂದು ನೋಟಿಸ್ ನೀಡಿದ್ದರು. ಆದರೆ ಈ ನೋಟಿಸ್ಗೆ ರಾಹುಲ್ ಗಾಂಧಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
ಈ ಹಿನ್ನೆಲೆಯಲ್ಲಿ ಲೈಂಗಿಕ ದೌರ್ಜನ್ಯ ಎದುರಿಸಿದ ಮಹಿಳೆಯರ ವಿವರ ಪಡೆಯಲು ಪೊಲೀಸರು ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಸುವ ಸಲುವಾಗಿ ಅವರ ನಿವಾಸಕ್ಕೆ ತೆರಳಿದ್ದಾರೆಂದು ತಿಳಿದು ಬಂದಿದೆ.