ನವದೆಹಲಿ, ಮಾ 20 (DaijiworldNews/HR): ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಇಂದು ಭಾರತಕ್ಕೆ ಆಗಮಿಸಿದ್ದು, ನವದೆಹಲಿಯ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.
ಎರಡು ದಿನಗಳ ಅಧಿಕೃತ ಪ್ರವಾಸದಲ್ಲಿರುವ ಭಾರತಕ್ಕೆ ಇಂದು ಮುಂಜಾನೆ ಆಗಮಿಸಿದ ಕಿಶಿದಾ ಅವರನ್ನು ರಾಷ್ಟ್ರ ರಾಜಧಾನಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಬರಮಾಡಿಕೊಂಡಿದ್ದಾರೆ.
ಇನ್ನು ಮಹಾತ್ಮ ಗಾಂಧಿ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿದ ನಂತರ, ಕಿಶಿದಾ ರಾಜ್ಘಾಟ್ನಲ್ಲಿ ಸಂದರ್ಶಕರ ಪುಸ್ತಕಕ್ಕೆ ಸಹಿ ಹಾಕಿದ್ದಾರೆ.