ಶಿವಮೊಗ್ಗ, ಮಾ 20 (DaijiworldNews/HR): ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್ ಕೂಗಿರುವುದು ಅಕ್ಷಮ್ಯ ಅಪರಾಧ. ಕೇವಲ ಸಿಆರ್ಪಿಸಿ107 ಸೆಕ್ಷನ್ ಹಾಕಿ ಅವನನ್ನು ಬಿಡಬಾರದು. ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಜಾನ್ ಕುರಿತ ಹೇಳಿಕೆ ವಿರೋಧಿಸಿ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಕೆಲ ಯುವಕರು ಪ್ರತಿಭಟನೆ ನಡೆಸಿದ್ದು, ಈ ವೇಳೆ ರಾಗಿಗುಡ್ಡದ ನಿವಾಸಿ ಮೌಸೀನ್ ಎಂಬಾತ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ್ದು, ಜೊತೆಗೆ ವಿಧಾನಸೌಧದಲ್ಲೂ ಆಜಾನ್ ಕೂಗಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದ.
ಇನ್ನುಆಜಾನ್ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಸ್.ಡಿ.ಪಿ.ಐ. ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇವರ ವಿರುದ್ಧ ಸರಿಯಾದ ಕ್ರಮ ತೆಗೆದುಕೊಳ್ಳಬೇಕು. ನಾನು ಮುಖ್ಯಮಂತ್ರಿ ಅವರಲ್ಲಿ ಈ ಬಗ್ಗೆ ಮನವಿ ಮಾಡುತ್ತೇನೆ. ಇದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದರು.
ಆಜಾನ್ ಕೂಗಿದ ಬಗ್ಗೆ ಅಲ್ಲಿನ ಶಬ್ಧದ ಬಗ್ಗೆ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ ಬಹಳ ಸ್ಪಷ್ಟವಾಗಿ ಹೇಳಿದೆ. ನಾನು ಕೊಡಗು, ಮಂಗಳೂರಿನಲ್ಲಿ ಆಜಾನ್ ಮೈಕ್ ನಲ್ಲಿ ಕೂಗಿರುವ ಬಗ್ಗೆ ಕೋರ್ಟ್ ವಿಚಾರ ಪ್ರಸ್ತಾಪ ಮಾಡಿದ್ದೇನೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್ ಕೂಗಿರುವುದು ಅಕ್ಷಮ್ಯ ಅಪರಾಧ. ವಿಧಾನಸೌಧದಲ್ಲಿ ಕೂಗುತ್ತೇನೆ ಎಂದಿದ್ದು ಕೂಡ ರಾಷ್ಟ್ರದ್ರೋಹ ಎಂದಿದ್ದಾರೆ.
ಇನ್ನು ಆತ ಪಿ.ಎಫ್.ಐ. ನಲ್ಲಾದರೂ ಇರಲಿ, ಎಸ್.ಡಿ.ಪಿ.ಐ. ಮತ್ತೊಂದು ಸಂಘಟನೆಯಲ್ಲಾದರಲ್ಲೂ ಇರಲಿ. ಪೊಲೀಸರು ಈ ಬಗ್ಗೆ ಬಿಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.