ಬೆಂಗಳೂರು, ಮಾ 21 (DaijiworldNews/HR): ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗೆ ದೊಡ್ಡ ವಂಚನೆ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಇದುವರೆಗೆ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಕೂಡ ಹೋಗಿಲ್ಲ. ಅಷ್ಟೇ ಅಲ್ಲ ಒಟ್ಟಾರೆ ಮೀಸಲಾತಿ ಪ್ರಮಾಣ ಶೇ. 50ರಿಂದ ಶೇ. 56ಕ್ಕೆ ಹೆಚ್ಚಿಸುವ ಬಗ್ಗೆಯೂ ಪ್ರಸ್ತಾವನೆಯು ರಾಜ್ಯ ಸರ್ಕಾರದಿಂದ ಸಲ್ಲಿಕೆ ಆಗಿಲ್ಲ ಎಂದು ಹೇಳಿದೆ. ಇದು ಆ ಸಮುದಾಯಗಳಿಗೆ ಮಾಡಿದ ದೊಡ್ಡ ಮೋಸ ಎಂದರು.
ಇನ್ನು ಇದು ಸ್ವತಃ ಕೇಂದ್ರ ಸಚಿವ ಹಾಗೂ ರಾಜ್ಯದ ಸಂಸದ ನಾರಾಯಣಸ್ವಾಮಿ ನೀಡಿದ ಲಿಖಿತ ಉತ್ತರದಿಂದ ಸಾಬೀತಾಗಿದೆ. ಈ ವಂಚನೆ ಖಂಡಿಸುವ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧಾರ ಮಾಡಿದೆ ಎಂದರು.